ಬೆಂಗಳೂರು: ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಇದರಿಂದ ಅವರ ಕುಟುಂಬಸ್ಥರಿಗೂ ಸೋಂಕು ಹರಡುತ್ತಿದೆ. ಹೀಗಾಗಿ ಸೋಂಕಿತ ನೌಕರರು ತಮ್ಮ ವಲಯ ವ್ಯಾಪ್ತಿಯ ಆರೋಗ್ಯಾಧಿಕಾರಿಯವರಿಂದ ಆನ್ಲೈನ್ ಪೋರ್ಟಲ್ನಲ್ಲಿ ನೋಂದಣಿ ಮಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಪಡಿಸಿರು ವೈದ್ಯಕೀಯ ಬೆಡ್ಗಳಲ್ಲಿ ಆಯುಷ್ಮಾನ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಸೂಚಿಸಲಾಗಿದೆ.

ಒಂದು ವೇಳೆ ಸರ್ಕಾರ ನಿಗದಿಪಡಿಸಿದ ಶೇಕಡಾ 50ರಷ್ಟು ಬೆಡ್ ಭರ್ತಿಯಾಗಿದ್ದರೆ, ಖಾಸಗಿ ಆಸ್ಪತ್ರೆ ಬೆಡ್ಗಳಿಗೆ ಸರ್ಕಾರ ನಿಗದಿಪಡಿಸಿದ ಮೊತ್ತವನ್ನು ಪಾಲಿಕೆಯ ಮ್ಯಾನೇಜ್ ಹೆಲ್ತ್ ಕೇರ್ ವತಿಯಿಂದ ಪಾವತಿಸಲು ಅನುಮತಿ ನೀಡಿ ವಿಶೇಷ ಆಯುಕ್ತರು ಆದೇಶ ಹೊರಡಿಸಿದ್ದಾರೆ.