ETV Bharat / state

Unlock 3.O : ಘಾಟಿ ಸುಬ್ರಹ್ಮಣ್ಯ ಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ!

ರಾಜ್ಯ ಸರ್ಕಾರ ಕೋವಿಡ್ ಅನ್​ಲಾಕ್ 3.Oನಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ಹಾಗೂ ಇತರೆ ಎಲ್ಲಾ ರೀತಿಯ ದೇವಾಲಯಗಳಿಗೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ನೀಡಿರುವ ಹಿನ್ನೆಲೆ ಭಾನುವಾರ ದೇವಾಲಯ ಆವರಣವನ್ನು ಶುಚಿಗೊಳಿಸಿ ಸ್ಯಾನಿಟೈಸ್ ಮಾಡಲಾಯಿತು..

ಘಾಟಿ ಸುಬ್ರಹ್ಮಣ್ಯ ಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ!

author img

By

Published : Jul 5, 2021, 1:48 PM IST

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ತಾಲೂಕಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯ ಇಂದು ಮುಂಜಾನೆಯಿಂದಲೇ ತೆರೆಯಲಾಗಿದ್ದು, ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಮುಂಜಾನೆ 6 ಗಂಟೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಅರ್ಚಕರು ಶಾಸ್ತ್ರೋಕ್ತವಾಗಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ದೇವಾಲಯದ ಬಾಗಿಲು ತೆರೆಯುವ ಮೂಲಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು.

ಘಾಟಿ ಸುಬ್ರಹ್ಮಣ್ಯ ಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ!

ರಾಜ್ಯ ಸರ್ಕಾರ ಕೋವಿಡ್ ಅನ್​ಲಾಕ್ 3.Oನಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ಹಾಗೂ ಇತರೆ ಎಲ್ಲಾ ರೀತಿಯ ದೇವಾಲಯಗಳಿಗೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ನೀಡಿರುವ ಹಿನ್ನೆಲೆ ಭಾನುವಾರ ದೇವಾಲಯ ಆವರಣವನ್ನು ಶುಚಿಗೊಳಿಸಿ ಸ್ಯಾನಿಟೈಸ್ ಮಾಡಲಾಯಿತು.

ದೇವಾಲಯಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ. ಸರ್ಕಾರ ಅನ್‌ಲಾಕ್ ಸಂದರ್ಭದಲ್ಲಿ ಸೂಚಿಸಲಾಗಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ದೇವಾಲಯದಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಮುಖ್ಯ ಕಾರ್ಯನಿರ್ವಹಣಾಕಾರಿ ಎನ್.ಕೃಷ್ಣಪ್ಪ ತಿಳಿಸಿದ್ದಾರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.