ನೆಲಮಂಗಲ: ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ಪದವಿ ಪೂರೈಸಿದ 720 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಪ್ರದಾನ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಬಗ್ಗೆ ಸಲಹೆಯನ್ನೂ ನೀಡಲಾಯ್ತು.
ಇಸ್ರೋದ ಮಾಜಿ ಮುಖ್ಯಸ್ಥ ಕಿರಣ್ ಕುಮಾರ್ ಮಾತನಾಡಿ, ಸಾಕಷ್ಟು ವಿದ್ಯಾರ್ಥಿಗಳು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನ ಮಾಡುತ್ತಿದ್ದಾರೆ. ನಮ್ಮ ದೇಶದಲ್ಲಿ ಅವಕಾಶಗಳು ಕಡಿಮೆ ಇದ್ದರೂ, ಅಭಿವೃದ್ಧಿಯತ್ತ ನಮ್ಮ ದೇಶ ಮುಂದೆ ಹೋಗುತ್ತಿದೆ. ಹೆಚ್ಚಿನ ಅವಕಾಶಗಳು ನಮ್ಮ ದೇಶದ ವಿದ್ಯಾರ್ಥಿಗಳಿಗೆ ದೊರೆತರೆ, ವಿಶ್ವದಲ್ಲಿಯೇ ಭಾರತ ವಿಶ್ವಗುರು ಆಗುವುದರಲ್ಲಿ ಅನುಮಾನವಿಲ್ಲ ಎಂದರು.