ನೆಲಮಂಗಲ(ಬೆಂ.ಗ್ರಾಮಾಂತರ): ತಾಲೂಕಿನಲ್ಲಿ ಕೊರೊನಾ ಸೊಂಕಿತರ ಪ್ರಕರಣಗಳು 185ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ವೈದ್ಯರು, ಪೊಲೀಸರು ಕಷ್ಟ ಪಡುತ್ತಿದ್ದಾರೆ.
ಇದರ ನಡುವೆ ಗ್ರಾಮ ಪಂಚಾಯತ್ ಸದಸ್ಯರ ಬೆಂಬಲಿಗರೊಂದಿಗೆ ಹುಟ್ಟುಹಬ್ಬದ ದರ್ಬಾರ್ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ನಿಯಮ ಮೀರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ವಾಜರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆಂಪರಾಜು, ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಆಚರಣೆಯಲ್ಲಿ ಯಾರೂ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಸಹ ಧರಿಸದೇ ಬರ್ತ್ಡೇ ಸೆಲೆಬ್ರೇಷನ್ ಮಾಡಿದ್ದಾರೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಲಾಕ್‌ಡೌನ್ ನಿಯಮ ಮರೆತು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.