ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 64 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆಯ ಕೊನೆ ದಿನ ಡಿಸೆಂಬರ್ 11 ಆಗಿದ್ದು, ಇಲ್ಲಿಯವರೆಗೂ ಒಟ್ಟು 3267 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 44 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 64 ಸದಸ್ಯರು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 771 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹೊಸಕೋಟೆ ತಾಲೂಕಿನ 26 ಗ್ರಾಮ ಪಂಚಾಯಿತಿಗಳ 494 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1848 ನಾಮಪತ್ರಗಳ ಪೈಕಿ 23 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 43 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 451 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಓದಿ: ಗ್ರಾ.ಪಂ.ಚುನಾವಣೆ ವ್ಯಕ್ತಿಗತವಾಗಿರಬೇಕು, ಯಾವುದೇ ಪಕ್ಷಕ್ಕೆ ಸೀಮಿತವಾಗಿರಬಾರದು: ಸಿದ್ದಗಂಗಾ ಶ್ರೀ
ನೆಲಮಂಗಲ ತಾಲೂಕಿನ 21 ಗ್ರಾಮ ಪಂಚಾಯಿತಿಗಳ 362 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1419 ನಾಮಪತ್ರಗಳ ಪೈಕಿ 21 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 21 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 320 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 21 ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದ್ದಾರೆ.