ದೇವನಹಳ್ಳಿ: ಆಗಿನ ಕೈಗಾರಿಕಾ ಸಚಿವ ಜೈಲು ಪಾಲಾದ್ರು. ಅಷ್ಟೆಲ್ಲಾ ಆದ್ರೂ ಬಿಜೆಪಿ ಸರ್ಕಾರಕ್ಕೆ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರವಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ KIADB ರೈತರ ಫಲವತ್ತಾದ ಸಾವಿರಾರು ಏಕರೆ ಭೂಸ್ವಾಧೀನಕ್ಕೆ ಮುಂದಾಗಿದೆ. ಭೂಸ್ವಾಧೀನ ವಿರೋಧಿ ಕಳೆದ 144 ದಿನಗಳಿಂದ ರೈತರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇಂದು ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆಯನ್ನ ಆಯೋಜಿಸಿತ್ತು. ರೈತರ ಹೋರಾಟಕ್ಕೆ ಬೆಂಬಲ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ: ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸವಾಗಿದೆ. ಇವತ್ತು ಬೆಂಗಳೂರಿನಲ್ಲಿ ಬದುಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಈ ಸನ್ನಿವೇಶದಲ್ಲಿ ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ, ಬೆಂಗಳೂರು ಬಿಟ್ಟು ಇತರ ಜಿಲ್ಲೆಗಳ ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ, ರೈತರ ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ ಎಂದರು.
ಇದನ್ನೂ ಓದಿ: ಹೈಕೋರ್ಟ್ ಆದೇಶಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ: ಎಂ ಪಿ ರೇಣುಕಾಚಾರ್ಯ