ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ, ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾಂಗ್ರೆಸ್ ಸರ್ಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ. ಚುನಾವಣೆಗೂ ಮುನ್ನ 'ಸರ್ವಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು. ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಕಲ್ಪ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
-
ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 24, 2023 " class="align-text-top noRightClick twitterSection" data="
ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ!!
ಚುನಾವಣೆಗೆ ಮುನ್ನ 'ಸರ್ವಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ.
ಇದು…
">ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 24, 2023
ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ!!
ಚುನಾವಣೆಗೆ ಮುನ್ನ 'ಸರ್ವಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ.
ಇದು…ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 24, 2023
ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ!!
ಚುನಾವಣೆಗೆ ಮುನ್ನ 'ಸರ್ವಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ.
ಇದು…
ಹೆಚ್ಡಿಕೆ ಟ್ವೀಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣ ವೇದಿಕೆ Xನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆ ಮನೆಗೂ 'ಮದ್ಯಭಾಗ್ಯ' ನೀಡಲು ಹೊರಟಿದೆ. ಸರ್ಕಾರ ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ವ್ಯಂಗ್ಯವಾಡಿದ್ದಾರೆ.
ಮುಕ್ತ ಮದ್ಯ ಮಾರಾಟಕ್ಕೆ ಅವಕಾಶ- ಹೆಚ್ಡಿಕೆ ಕಿಡಿ: ಖೊಟ್ಟಿ ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತಿ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ ಎಂದು ಪ್ರಶ್ನಿಸಿದ್ದಾರೆ.
3,000 ಜನಸಂಖ್ಯೆಯುಳ್ಳ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆ ಹಾಳು ಮಾಡಲಿದೆ ಈ ಸರ್ಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಟೀಕೆ ಮಾಡಿದ್ದಾರೆ.
ಇದನ್ನೂ ಓದಿ: 11 ರಾಜ್ಯ ಸಂಪರ್ಕಿಸುವ 9 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲುಗಳಿಗೆ ಇಂದು ಪ್ರಧಾನಿ ಮೋದಿ ಚಾಲನೆ
ನಾರಿಯರ ಬಾಳಿಗೆ ಬೆಂಕಿ: ನಾರಿಯರಿಗೆ 'ಶಕ್ತಿ' ತುಂಬುತ್ತೇವೆ ಎಂದ ಸರ್ಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. 'ಗೃಹಲಕ್ಷ್ಮೀ' ಎಂದ ಸರ್ಕಾರ, ಅವರ ಬಾಳಿಗೆ ಗ್ರಹಣವಾಗಿದೆ. 'ಗೃಹಜ್ಯೋತಿ' ಎಂದ ಸರ್ಕಾರ, ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. 'ಅನ್ನಭಾಗ್ಯ' ಎಂದ ಸರ್ಕಾರ, ಈಗ 'ಮದ್ಯಭಾಗ್ಯ' ಎನ್ನುತ್ತಿದೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ. ಮದ್ಯಭಾಗ್ಯ ಎನ್ನುವ ಹ್ಯಾಷ್ ಟ್ಯಾಗ್ ಬಳಸಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸರು: 670 ಕೇಸ್ ದಾಖಲು, ₹3.36 ಲಕ್ಷ ದಂಡ ವಸೂಲಿ