ದೊಡ್ಡಬಳ್ಳಾಪುರ: ಪಕ್ಷಾಂತರ ಮಾಡಿದ ಕಾರಣಕ್ಕೆ ಕಿರುಕುಳ ನೀಡುತ್ತಿದ್ದರು ಎಂದು ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ತಳವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೊಡ್ಡಬಳ್ಳಾಪುರ ನಗರದ ಕಚೇರಿ ಪಾಳ್ಯದ ನಿವಾಸಿ ವಿನೋದ್ (29) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಸಾವಿಗೂ ಮುನ್ನ ಡೆತ್ನೋಟ್ ಬರೆದಿದ್ದು, ಮೂರು ತಿಂಗಳ ಹಿಂದೆ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರವಾಗಿದ್ದೆ. ಈ ಕಾರಣಕ್ಕೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಐವರ ಹೆಸರು ಬರೆದಿಟ್ಟಿದ್ದಾನೆ. ಈ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೋಲಾರ: ಕೆರೆಯಲ್ಲಿ ಮಗುವಿನ ಶವ ಪತ್ತೆ, ತಂದೆಗಾಗಿ ಪೊಲೀಸರ ಹುಡುಕಾಟ