ETV Bharat / state

ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

author img

By

Published : Nov 15, 2019, 12:16 PM IST

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ಸೂಚಿಸಿದರು.

ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂ.ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,‌ ತಂಬಾಕು ಸೇವನೆಯಿಂದಾಗಿ ಕ್ಯಾನ್ಸರ್​ನಂತಹ ಮಾರಾಣಾಂತಿಕ ರೋಗಗಳು ಬರುತ್ತವೆ ಎಂದು ತಿಳಿಸಿದರು. ಇದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶಿಬಿರಗಳನ್ನು ಏರ್ಪಡಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

2003ರ ಕೋಟ್ಪಾ ಕಾಯಿದೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೆಕ್ಷನ್ 4 ಮತ್ತು 6 ಬಿ ಅನ್ವಯ, ಶಾಲೆಯ ಮುಖ್ಯ ಪ್ರವೇಶ ದ್ವಾರಗಳಲ್ಲಿ ತಂಬಾಕು ಮುಕ್ತ ಶಾಲೆ ಮತ್ತು ತಂಬಾಕು ಸೇವನೆ ನಿಷೇಧ ಎಂದು ಸೂಚಿಸುವ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು. ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಶಾಲಾ ಕಾಲೇಜು ಆವರಣಗಳು ಮತ್ತು ಸರ್ಕಾರಿ ಕಚೇರಿ ಆವರಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಉಲ್ಲಂಘನೆ ಮಾಡುವವರಿಗೆ ರೂ. 200 ರವರೆಗೆ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಏರ್ಪಡಿಸಿ, ಕ್ಷಯ ಕಾಯಿಲೆಯ ಗುಣ ಲಕ್ಷಣಗಳು ಕಂಡು ಬಂದಲ್ಲಿ ಉಚಿತವಾಗಿ ಚಿಕಿತ್ಸೆ ಕೊಟ್ಟು ಶೀಘ್ರವಾಗಿ ಗುಣಪಡಿಸಲು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗೆ ತಿಳಿಸಿದರು. ರಾಷ್ಟ್ರೀಯ ಗುಣಾತ್ಮಕ ಸೇವೆಯಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ, 'ಸ್ವಚ್ಛ ಸ್ವಾಸ್ಥ್ಯ ಮತ್ತು ಸರ್ವತ್ರಃ ಕಾರ್ಯ' ಎಂಬ ಪಾಕ್ಷಿಕ ಸ್ವಚ್ಛತಾ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು. ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

Intro:KN_BNG_01_14_DC_Meeting_Ambarish_7203301
Slug: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಕಡ್ಡಾಯವಾಗಿ ನಿಷಿದ್ಧ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವುದನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷಿದ್ಧಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರರವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,‌ ತಂಬಾಕು ಸೇವನೆಯಿಂದಾಗಿ ಕ್ಯಾನ್ಸರ್, ಹೃದಯ, ಶ್ವಾಸ ಸಂಬಂಧಿ ಇತ್ಯಾದಿ ಮಾರಾಣಾಂತಿಕ ಖಾಯಿಲೆಗಳು, ಗರ್ಭಪಾತ, ಗರ್ಭದಾರಣೆಯಲ್ಲಿ ಕುಂಠಿತ, ತಂಬಾಕು ಸೇವನೆಯಿಂದ ದಂತಕ್ಷಯ ರೋಗ ಸೇರಿದಂತೆ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕ್ರಮಬದ್ದವಾಗಿ ಶಿಬಿರಗಳನ್ನು ಜಿಲ್ಲೆಯಲ್ಲಿ ಏರ್ಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

2003 ರ ಕೋಟ್ಪಾ ಕಾಯಿದೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೆಕ್ಷನ್ 4 ಮತ್ತು 6 ಬಿ ಅನ್ವಯ ಶಾಲೆಯ ಮುಖ್ಯ ಪ್ರವೇಶ ದ್ವಾರಗಳಲ್ಲಿ ತಂಬಾಕು ಮುಕ್ತ ಶಾಲೆ ಮತ್ತು ತಂಬಾಕು ಸೇವನೆ ನಿಷಿದ್ಧ ಎಂದು ಸೂಚಿಸುವ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಶಾಲಾ- ಕಾಲೇಜು ಆವರಣಗಳು ಮತ್ತು ಸರ್ಕಾರಿ ಕಚೇರಿ ಆವರಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಉಲ್ಲಂಘನೆ ಮಾಡುವವರಿಗೆ ರೂ.200 ರವರೆಗೆ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದ್ರು.

ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ, ಕೈಗಾರಿಕಾ ಕಾರ್ಮಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶ್ವಾಸಕೋಶ ಸಂಬಂಧಿತ ಕ್ಷಯ (ಟಿ.ಬಿ) ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಏರ್ಪಡಿಸಿ ಪ್ರಾಥಮಿಕ ಹಂತದ ಕಫಾ ಪರೀಕ್ಷೆಯನ್ನು ನಡೆಸಿ ಕ್ಷಯ ಖಾಯಿಲೆಯ ಗುಣ ಲಕ್ಷಣಗಳು ಕಂಡು ಬಂದಲ್ಲಿ ಉಚಿತವಾಗಿ ಚಿಕಿತ್ಸೆ ಕೊಟ್ಟು ಶೀಘ್ರವಾಗಿ ಗುಣಪಡಿಸಲು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗೆ ತಿಳಿಸಿದರು.

ರಾಷ್ಟ್ರೀಯ ಗುಣಾತ್ಮಕ ಸೇವೆಯಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ “ಸ್ವಚ್ಛ, ಸ್ವಾಸ್ಥ್ಯ, ಮತ್ತು ಸರ್ವತ್ರಃ ಕಾರ್ಯ" ಎಂಬ ಪಾಕ್ಷಿಕ ಸ್ವಚ್ಛತಾ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಮ್ಮಿಕೊಳ್ಳಬೇಕು ಮತ್ತು ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಕ್ರಮಬದ್ಧವಾಗಿ ವಿಲೇವಾರಿ ಮಾಡಲು ತರಬೇತಿ ಅವಶ್ಯಕವಾಗಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್‍ಗುನ್ಯ ಪ್ರಕರಣಗಳನ್ನು ನಿಯಂತ್ರಿಸಲು, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಸಿಮೆಂಟ್ ತೊಟ್ಟಿಗಳು, ಒಡೆದ ಬಕೆಟ್‍ಗಳು, ಡ್ರಮ್ಮುಗಳು, ಬ್ಯಾರಲ್‍ಗಳು, ಡಬ್ಬಗಳು, ಏರ್ ಕೂಲರ್‍ಗಳು, ತೆಂಗಿನ ಚಿಪ್ಪು, ಒಡೆದ ಮಡಿಕೆಗಳು, ಟೈರ್‍ಗಳಲ್ಲಿ ನೀರು ಸಂಗ್ರಹಣೆಯಾಗದಂತೆ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

ಎಚ್.ಐ.ವಿ ಮತ್ತು ಏಡ್ಸ್ ಸೋಂಕಿತದಿಂದ ಬದುಕುತ್ತಿರುವ ಎಲ್ಲಾ ವ್ಯಕ್ತಿಗಳನ್ನು ಗುರುತಿಸಿ ಹಾರೈಕೆ ಮತ್ತು ಬೆಂಬಲದ ಜೊತೆಗೆ ತಮ್ಮ ಬದುಕನ್ನು ಹಸನಾಗಿಸಲು ಉತ್ತಮ ದಿನಚರಿಯನ್ನು ಅಳವಡಿಸಿಕೊಂಡು ಅವರಿಗಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿ ಯಾವುದೇ ಕಳಂಕ, ತಾರತಮ್ಯ ಮತ್ತು ದೌರ್ಜನ್ಯಕ್ಕೆ ಒಳಗಾಗದಂತೆ ಮಾನಸಿಕವಾಗಿ ನೊಂದಿರುವ ವ್ಯಕ್ತಿಗಳಿಗೆ ಆಪ್ತ ಸಮಾಲೋಚನೆ ಮೂಲಕ ಮನೋಸ್ಥೈರ್ಯ ತುಂಬಿ ಸ್ವಯಂ ಪ್ರೇರಣೆಯಿಂದ ಚಿಕಿತ್ಸೆ ಪಡೆದು ಎಲ್ಲರಂತೆ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು ಸೂಚನೆ ನೀಡಿದರು.Body:NoConclusion:No

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.