ETV Bharat / state

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

ವಿದೇಶದಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸುವಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಇಂದು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Kempegowda International Airport
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
author img

By

Published : Dec 24, 2020, 5:19 PM IST

ದೇವನಹಳ್ಳಿ: ಬ್ರಿಟನ್​ನಲ್ಲಿ ಕೊರೊನಾ ವೈರಸ್​ನ ಎರಡನೇ ಅಲೆ ಪ್ರಾರಂಭವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಂಪೇಗೌಡ ವಿಮಾಣ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಇಂದು ಆರೋಗ್ಯಾಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆರೋಗ್ಯ ಅಧಿಕಾರಿಗಳ ಭೇಟಿ

ಆರೋಗ್ಯ ಇಲಾಖೆಯ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿ ಪ್ರಭುದೇವ ಗೌಡ ಸೇರಿದಂತೆ ಅಧಿಕಾರಿಗಳ ತಂಡ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಅಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿತು.

ಈ ವೇಳೆ ಮಾತನಾಡಿದ ನೋಡಲ್​ ಅಧಿಕಾರಿ ಪ್ರಭುದೇವ ಗೌಡ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸೂಚನೆಯಂತೆ ಯುಕೆಯಿಂದ ಬರುವ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್​ಟಿಪಿಸಿಆರ್​​ ಟೆಸ್ಟ್ ಮಾಡಿಸಿಕೊಳ್ಳಬೇಕು. ವರದಿಯಲ್ಲಿ ಪ್ರಯಾಣಿಕರಿಗೆ ಪಾಸಿಟಿವ್ ಬಂದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಐಸೋಲೇಶನ್ ಮಾಡಲಾಗುವುದು. ವರದಿಯಲ್ಲಿ ನೆಗೆಟಿವ್ ಬಂದಲ್ಲಿ 14 ದಿನಗಳ ಕಾಲ ಹೋಮ್ ಐಸೋಲೇಶನ್ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಉಚಿತ ಆರ್​ಟಿಪಿಸಿಆರ್​ ಟೆಸ್ಟ್​

ವಿದೇಶದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸುವಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಏರ್​ಪೋರ್ಟ್​ನಲ್ಲಿ ಖಾಸಗಿಯವರಿಂದ ಆರ್​ಟಿಸಿಸಿಆರ್​ ಟೆಸ್ಟ್ ಮಾಡಲಾಗುತ್ತಿದೆ. ಈ ಟೆಸ್ಟ್​ಗೆ 5 ಸಾವಿರ ಹಣವನ್ನು ಪ್ರಯಾಣಿಕರೇ ಪಾವತಿಸಬೇಕು. 5 ಸಾವಿರ ಹಣ ಪಾವತಿಸಿದರೆ 15 ನಿಮಿಷದಲ್ಲಿ ಟೆಸ್ಟ್ ವರದಿ ಪ್ರಯಾಣಿಕರ ಕೈಗೆ ಸಿಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಪ್ರಯಾಣಿಕರಿಗೆ ಉಚಿತವಾಗಿ ಆರ್​ಟಿಸಿಸಿಆರ್ ಟೆಸ್ಟ್ ಮಾಡಿಸಲು ತೀರ್ಮಾನಿಸಿದ್ದು, ಏರ್​ಪೋರ್ಟ್ ಒಳಗೆ ಸರ್ಕಾರದಿಂದ ಲ್ಯಾಬ್​ ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಬ್ರಿಟನ್​ನಿಂದ ರಾಜ್ಯಕ್ಕೆ ಬಂದಿರುವ 2,115 ಪ್ರಯಾಣಿಕರನ್ನು ಪತ್ತೆ ಮಾಡಲಾಗಿದ್ದು, ಅವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ನೋಡಲ್​ ಅಧಿಕಾರಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.