ದೊಡ್ಡಬಳ್ಳಾಪುರ: ಲಾಕ್ಡೌನ್ನಿಂದಾಗಿ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ರಾತ್ರಿ ಸುರಿದ ಮಳೆಯಿಂದ ಕೆಸರು ಗದ್ದೆಯಂತಾಗಿದೆ. ಹೀಗಾಗಿ, ದೊಡ್ಡಬಳ್ಳಾಪುರದಿಂದ ಕೊರಟಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಗೌಡನಕುಂಟೆ ಮಾರ್ಗವಾಗಿ ಗೊರವನಹಳ್ಳಿಗೆ ಸಂಪರ್ಕ ಕಲ್ಪಿಸುವ ಕೊರಟಗೆರೆ ಮಾರ್ಗದ ರಸ್ತೆಯ ಕಾಮಗಾರಿ ಲಾಕ್ಡೌನ್ನಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿತ್ತು.
ಲಾಕ್ಡೌನ್ ಆರಂಭಕ್ಕೂ ಮುನ್ನ ರಸ್ತೆ ಕಾಮಗಾರಿಗಾಗಿ ಮಣ್ಣು ಹಾಕಲಾಗಿದೆ. ಆದರೆ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿ ಹಾಕಲಾಗಿದ್ದ ಮಣ್ಣು ಕೆಸರಿನ ಗದ್ದೆಯಂತಾಗಿದೆ. ಇದರಿಂದ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಸಂಚರಿಸಲು ಪರದಾಡಬೇಕಿದೆ. ಹೀಗಾಗಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.