ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಇದೆ. ಈ ಮಳೆ ನ. 17ರವರೆಗೆ ಕರ್ನಾಟಕದಲ್ಲಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕರಾವಳಿ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಚೂರು, ಸೇರಿದಂತೆ ಮಲೇನಾಡು ಭಾಗಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣ ಇದ್ದು, ಮುಂಜಾವು ಮಂಜು ಮುಸುಗಿದ ಚಳಿ ಕೂಡ ಇರಲಿದೆ.
ತಮಿಳುನಾಡಿನಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯಾಗುತ್ತಿದೆ. ಇದರ ಪ್ರಭಾವ ಬೆಂಗಳೂರಿನ ಮೇಲೆ ಕೂಡ ಇರಲಿದ್ದು, ಬೆಂಗಳೂರಿನಲ್ಲಿ ಸಾಮಾನ್ಯ ತಾಪಮಾನ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಳೆಯಿಂದ ಆಗುವ ಹಾನಿ ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ: ನವೆಂಬರ್ 2ರಿಂದ ರಾಜ್ಯದಲ್ಲಿ ಮತ್ತೆ ಮಳೆ: ಯೆಲ್ಲೋ ಅಲರ್ಟ್ ಘೋಷಣೆ