ETV Bharat / state

ಆನೇಕಲ್ ತಾಲೂಕಿನ 67 ಎಕರೆ ಗೋಮಾಳ ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶ - ಹೈಕೋರ್ಟ್ ಸರ್ಕಾರಕ್ಕೆ ಸೂಚನೆ

ಮುಂದಿನ ಮೂರು ತಿಂಗಳಲ್ಲಿ ಗೋಮಾಳ ಜಮೀನು ಮತ್ತು ಎಲ್ಲ ಮನೆಗಳನ್ನು ತೆರವುಗೊಳಿಸಬೇಕು. ಆ ಬಳಿಕ ಆದೇಶದ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು 2023 ರ ಜನವರಿ 25ಕ್ಕೆ ಮುಂದೂಡಿತು.

ಆನೇಕಲ್ ತಾಲೂಕಿನ 67 ಎಕರೆ ಗೋಮಾಳ ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶ
High Court order to vacate encroachment of 67 acres Gomala of Anekal Taluk
author img

By

Published : Oct 18, 2022, 1:39 PM IST

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯ ಕಾಚರನಾಯಕನಹಳ್ಳಿಯಲ್ಲಿ ಖಾಸಗಿಯವರಿಂದ ಒತ್ತುವರಿಯಾಗಿರುವ 67 ಎಕರೆ ಗೋಮಾಳ ಜಮೀನನ್ನು ತೆರವು ಮಾಡಿ ಮುಂದಿನ ಮೂರು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಗೋಮಾಳ ಜಮೀನು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ ಕಾಚರನಾಯಕನಹಳ್ಳಿಯ ನಿವಾಸಿ ಎನ್. ಜಯಪಾಲರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ. ವರಾಲೆ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ವೇಳೆ ಹಾಜರಾದ ಸರ್ಕಾರದ ಪರ ವಕೀಲರು, ಆನೇಕಲ್ ತಹಶೀಲ್ದಾರ್ ಸಲ್ಲಿಸಿದ್ದ ಪ್ರಮಾಣ ಪತ್ರ ಸಲ್ಲಿಸಿ 67 ಎಕರೆ ಜಮೀನು ಒತ್ತುವರಿ ಮಾಡಲಾಗಿದೆ. ಅಲ್ಲದೆ, 306 ಮನೆಗಳನ್ನು ನಿಮಾಣ ಮಾಡಲಾಗಿದೆ. ಈಗಾಗಲೇ 30 ಮನೆಗಳ ತೆರವು ಮಾಡಲಾಗಿದೆ. ಉಳಿದಂತೆ ಇತರೆ ಮನೆಗಳನ್ನು ತೆರವುಗೊಳಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಮುಂದಿನ ಮೂರು ತಿಂಗಳಲ್ಲಿ ಗೋಮಾಳ ಜಮೀನು ಮತ್ತು ಎಲ್ಲ ಮನೆಗಳನ್ನು ತೆರವುಗೊಳಿಸಬೇಕು. ಆ ಬಳಿಕ ಆದೇಶದ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು 2023 ರ ಜನವರಿ 25ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ಕಾಚರನಾಯಕನಹಳ್ಳಿಯಲ್ಲಿ ಗೋಮಾಳ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಕೋರಿ ಅದೇ ಗ್ರಾಮದ ನಿವಾಸಿ ಎನ್. ಜಯಪಾಲರೆಡ್ಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಸರ್ಕಾರಿ ಜಮೀನುಗಳ ಒತ್ತುವರಿ ಸಂಬಂಧ ಸರ್ವೇ ಮಾಡಿ ತೆರವು ಮಾಡಬೇಕು ಎಂದು ಈ ಹಿಂದೆ ಸೂಚನೆ ನೀಡಿತ್ತು.

ಇದನ್ನೂ ಓದಿ: ಆನೇಕಲ್​ನಲ್ಲಿ ಪುಡಿ ರೌಡಿಯಿಂದ ಮಾರಣಾಂತಿಕ ಹಲ್ಲೆ, ವೃದ್ಧ ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.