ದೊಡ್ಡಬಳ್ಳಾಪುರ:ಕೃಷಿ ಭೂಮಿಯನ್ನು ಮಲ್ಟಿ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೃಷಿಯೋಗ್ಯ ಭೂಮಿಯನ್ನು ಕೈಗಾರಿಕೆಗೆ ಕೊಡಲು ಒಪ್ಪದ ರೈತರು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಭಾಗಿಯಾಗಿ ಮಾತನಾಡಿ, ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಶಾಸನದಂತೆ ಯಾವುದೇ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕಾದರೆ ಆ ಭಾಗದ ಶೇ. 80ರಷ್ಟು ರೈತರ ಒಪ್ಪಿಗೆ ಪಡೆದು ಕೈಗಾರಿಕೆ ಸ್ಥಾಪನೆ ಮಾಡಬೇಕು. ಆದರೆ ಈಗಿನ ಸರ್ಕಾರ, ರೈತರು, ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಕನಿಷ್ಠ ಮಾಹಿತಿ ನೀಡದೆಯೇ ಕೈಗಾರಿಕೆ ಸ್ಥಾಪನೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.
ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಕೆಐಎಡಿಬಿ ಭೂ ಸ್ವಾಧೀನ ಅಧಿಕಾರಿ ಅನಿಲ್ ಕುಮಾರ್ ಮಾತನಾಡಿ, ಕೂಡಲೇ ನಮ್ಮ ಕೈಗಾರಿಕಾ ಇಲಾಖೆಯ ಮುಖ್ಯ ಆಯುಕ್ತರ ಜೊತೆ ರೈತ ಮುಖಂಡರು, ಶಾಸಕರು, ಸಂಸದರ ಸಭೆ ಆಯೋಜಿಸಿ ಉದ್ದೇಶಿತ ಯೋಜನೆಯ ಸಾಧಕ ಭಾದಕ ಚರ್ಚೆಗಳನ್ನು ಮಾಡಲಾಗುವುದು ಎಂದರು.