ದೇವನಹಳ್ಳಿ : ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಅವರಿಗೆ ಸೋಂಕು ಬಾಧಿಸಿರುವುದು ದೃಢಪಟ್ಟಿದೆ.
ಜಿಲ್ಲಾಧಿಕಾರಿ ಕೆಮ್ಮು, ನೆಗಡಿ ಮತ್ತು ಜ್ವರದಿಂದ ಬಳಲುತ್ತಿದ್ದು ಅವರ ಗಂಟಲು ದ್ರವವನ್ನು ಪರೀಕ್ಷೆಗೆಂದು ಲ್ಯಾಬ್ಗೆ ಕಳುಹಿಸಲಾಗಿತ್ತು. ಹೀಗಾಗಿ ಮುಂಜಾಗೃತ ಕ್ರಮವಾಗಿ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇವತ್ತು ಕೊರೊನಾ ರಿಪೋರ್ಟ್ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೊರೊನಾ ವಾರಿಯರ್ಗಳಲ್ಲಿ ಜಿಲ್ಲಾಧಿಕಾರಿ ರವೀಂದ್ರ ಪ್ರಮುಖರು. ವಿದೇಶಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ತಾಯ್ನಾಡಿಗೆ ಕರೆ ತರುವ ಉಸ್ತುವಾರಿ ವಹಿಸಿಕೊಂಡಿದ್ದ ಇವರು, ವಂದೇ ಭಾರತ್ ಮಿಷನ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಯಾಣಿಕರಿಗೆ ಸರಿಯಾದ ಕ್ವಾರಂಟೈನ್ ವ್ಯವಸ್ಥೆ ಮಾಡಿಕೊಡುವಲ್ಲಿ ಶ್ರಮಿಸಿದ್ದರು.