ಹೊಸಕೋಟೆ: ರೆಸಾರ್ಟ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಬಳಿಯ ಸೊಲೇಸ್ ರೆಸಾರ್ಟ್ನಲ್ಲಿ ಬೆಳಕಿಗೆ ಬಂದಿದೆ.
ಎಎಸ್ಪಿ ಲಕ್ಷ್ಮಿ ಗಣೇಶ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರನ್ನು ಬಳಸಿ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಇಬ್ಬರು ಆರೋಪಿಗಳನ್ನ ಬಂಧಿಸಿ ರೆಸಾರ್ಟ್ ಸೀಜ್ ಮಾಡಿರೋ ಪೊಲೀಸರು, ಐವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಇನ್ನು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.