ದೇವನಹಳ್ಳಿ: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಂ ಅವರ 35ನೇ ಪುಣ್ಯಸ್ಮರಣೆಯ ದಿನ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಸಮಾಜ ಕಲ್ಯಾಣಾಧಿಕಾರಿಗೆ ಅವಮಾನಿಸಿದ ಆರೋಪ ಕೇಳಿ ಬಂದಿದೆ.
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಬಾಬು ಜಗಜೀವನ್ ರಾಂ ಅವರ 35 ನೇ ಪುಣ್ಯಸ್ಮರಣೆ ಕಾರ್ಯಕ್ರಮ ಮಾಡಲಾಗಿತ್ತು, ತಹಶೀಲ್ದಾರ್ ಗೈರು ಹಾಜರಿಯಲ್ಲಿ ಸರ್ಕಾರದ ಶಿಷ್ಟಾಚಾರದಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆದಿದೆ. ಬಾಬು ಜಗಜೀವನ್ ರಾಂ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
ಕಾರ್ಯಕ್ರಮ ನಡೆಯುವ ಸಮಯದಲ್ಲಿ ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಕಾರಹಳ್ಳಿ ಮುನೇಗೌಡ ಕಾರ್ಯಕ್ರಮ ಅವರಣ ಪ್ರವೇಶಿಸಿದ್ದಾರೆ, ಪಕ್ಷದ ತಾಲೂಕು ಅಧ್ಯಕ್ಷರನ್ನ ಕಂಡ ಶಾಸಕ ನಿಸರ್ಗ ನಾರಾಯಣ ಸ್ವಾಮಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಳ್ಳಲು ಪಕ್ಕದಲ್ಲಿ ಕುಳಿತ್ತಿದ್ದ ಸಮಾಜ ಕಲ್ಯಾಣಾಧಿಕಾರಿ ಚನ್ನಬಸಪ್ಪರವರನ್ನ ಬೇರೆಡೆ ಕುರುವಂತೆ ಹೇಳಿ ಪಕ್ಕದಲ್ಲಿ ಪಕ್ಷದ ಅಧ್ಯಕ್ಷರನ್ನ ಕೂರಿಸಿಕೊಂಡಿದ್ದಾರೆ, ಶಾಸಕರ ವರ್ತನೆಗೆ ಅಸಮಾಧಾನಗೊಂಡ ದಲಿತ ಮುಖಂಡರು ಶಾಸಕರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿದೆ.