ನೆಲಮಂಗಲ: ಪಟ್ಟಣದ ಸುಭಾಷ್ ನಗರದ ನಿವಾಸಿ, ಪುರಸಭಾ ಸದಸ್ಯ ಶಿವಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದರು.
ಬೆಳಿಗ್ಗೆಯಿಂದ ರಾತ್ರಿವರೆಗೂ ಕಾಗದ ಪತ್ರಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕುಟುಂಬ ಸದಸ್ಯರ ವಿಚಾರಣೆ ನಡೆಸಿದರು. ತನಿಖೆ ಮುಗಿಸಿದ ಅಧಿಕಾರಿಗಳು ಮನೆಯಿಂದ ಹೊರಗೆ ಬಂದಿದ್ದಾರೆ.
ಮನೆಯಿಂದ ಹೊರ ಬರುವಾಗ ಸೂಟ್ಕೇಸ್ ಮತ್ತು ಬ್ಯಾಗ್ನಲ್ಲಿ ಪ್ರಮುಖ ಕಡತಗಳನ್ನು ತೆಗೆದುಕೊಂಡು ಬಂದಿದ್ದಾರೆ. ಶಿವಕುಮಾರ್ ಮನೆಯಲ್ಲಿ ಒಟ್ಟು 1.8 ಕೋಟಿ ರೂ. ಹಣ ಸಿಕ್ಕಿರುವ ಬಗೆಗೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.