ETV Bharat / state

ಕೈಗಾರಿಕಾ ಉದ್ಯಮಿಗಳ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಜಗದೀಶ್ ಶೆಟ್ಟರ್ ತಾಕೀತು

ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ನೆಲಮಂಗಲ ತಾಲೂಕಿನ ದಾಬಸ್‌‌ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಅಭಿವೃದ್ಧಿಪಡಿಸಲಾದ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಭೇಟಿ ನೀಡಿದ ಸಚಿವರು, ಕೈಗಾರಿಕೋದ್ಯಮಿಗಳ ಜೊತೆ ಚರ್ಚಿಸಿದರು.

Jagadish shetter
ಜಗದೀಶ್ ಶೆಟ್ಟರ್
author img

By

Published : Aug 9, 2020, 4:14 AM IST

ನೆಲಮಂಗಲ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಶೀಘ್ರ ಕ್ರಮ ಕೈಗೊಳ್ಳಿ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ತಾಲೂಕಿನ ದಾಬಸ್‌‌ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಅಭಿವೃದ್ಧಿಪಡಿಸಲಾದ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಭೇಟಿ ನೀಡಿದ ಸಚಿವರು, ಕೈಗಾರಿಕೋದ್ಯಮಿಗಳ ಜೊತೆ ಚರ್ಚಿಸಿದರು.

‌ದಾಬಸ್‌ಪೇಟೆ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಕೈಗಾರಿಕೆಗಳಿಗೆ ಭೂಮಿ ನೀಡುವುದರ ಜೊತೆಗೆ ಅಗತ್ಯವಿರುವ ವಿದ್ಯುತ್‌, ನೀರು, ಸುರಕ್ಷತೆ ಹಾಗೂ ಇತರೆ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಮಂಡಳಿಯ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ಸಮರ್ಪಕವಾಗಿ ಮಾಡಿದರೇ ಮಾತ್ರ ಕೈಗಾರಿಕೆಗಳು ಸುಲಭವಾಗಿ ತಮ್ಮ ಉತ್ಪಾದನೆ ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುತ್ತವೆ. ಜೊತೆಗೆ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಸಾಧ್ಯ ಎಂದ ಸಚಿವರು ಹೇಳಿದರು.

ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿಯ ಬೇಡಿಕೆ ಹೆಚ್ಚಿರುವುದರಿಂದ ಮಂಡಳಿ ವತಿಯಿಂದ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು ಅಭಿವೃದ್ಧಿಗೊಳಿಸಿ ಹಂಚಿಕೆಯನ್ನು ಮಾಡುವ ಕಾರ್ಯಕ್ಕೆ ವೇಗಗೊಳಿಸಬೇಕಾಗಿದೆ ಎಂದು ಹೇಳಿದರು.

ತ್ರಿವೇಣಿ ಟ್ರೀಬ್ಯೂನ್‌ ಮತ್ತು ಕೆಬಿಡಿ ಕಲ್ಪತರು ಕಂಪನಿಗಳಿಗೆ ಭೇಟಿ ನೀಡಿ ಕೋವಿಡ್‌-19 ಸೋಂಕು ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಚಿವರ ಜೊತೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಿಇಓ ಡಾ. ಶಿವಶಂಕರ್‌ ಸೇರಿದಂತೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.