ETV Bharat / state

ನಾಳೆ ಬೆಳಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ನಾಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಜೆಡಿಎಸ್​​​​​​​ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

JDLP meeting in vidhanasoudha
ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ
author img

By

Published : Sep 22, 2020, 11:07 PM IST

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ ಪಕ್ಷ ಪ್ರಸ್ತಾಪಿಸಬೇಕಿರುವ ವಿಷಯಗಳ ಕುರಿತು ಚರ್ಚಿಸಲು ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಾಳೆ ಬೆಳಗ್ಗೆ 9.30ಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಮಾಜಿ ಸಚಿವ ಬಂಡೆಪ್ಪ ಕಾಂಶಪೂರ ಅವರು ತಮ್ಮ ಪಕ್ಷದ ಎಲ್ಲ ಶಾಸಕರಿಗೂ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ಅಧಿವೇಶನದಲ್ಲಿ ಯಾವ - ಯಾವ ವಿಷಯಗಳ ಬಗ್ಗೆ ಆದ್ಯತೆ ನೀಡಿ ಚರ್ಚೆ ಮಾಡಬೇಕು. ಪಕ್ಷ ಯಾವ ನಿಲುವು ತೆಗೆದುಕೊಳ್ಳಬೇಕು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಭೂ ಸುಧಾರಣಾ ತಿದ್ದುಪಡಿ ವಿಧೇಯಕ, ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಈಗಾಗಲೇ ವಿರೋಧಿಸಿರುವ ಜೆಡಿಎಸ್, ಸದನದಲ್ಲಿ ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾವಿಸುವ ಸಾಧ್ಯತೆಗಳಿವೆ. ನೆರೆ ಹಾವಳಿ, ಅತಿವೃಷ್ಟಿ, ನಿರುದ್ಯೋಗ, ಕೊರೊನಾದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ಮತ್ತಿತರ ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.