ETV Bharat / state

Congress 5 Guarantees: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕುವುದು ಒಳ್ಳೆಯದೇ: ಕೆ.ಹೆಚ್. ಪುಟ್ಟಸ್ವಾಮಿಗೌಡ - kh puttaswamy gowda

ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕುವುದು ಒಳ್ಳೆಯದೇ, ಇದರಿಂದ ಬಡವರಿಗೆ ಯೋಜನೆಗಳು ತಲುಪುತ್ತವೆ ಎಂದು ಪಕ್ಷೇತರ ಶಾಸಕರಾದ ಕೆ ಹೆಚ್ ಪುಟ್ಟಸ್ವಾಮಿಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

kh puttaswamy gowda
ಕೆ.ಹೆಚ್. ಪುಟ್ಟಸ್ವಾಮಿಗೌಡ
author img

By

Published : Jun 10, 2023, 8:56 AM IST

ಮಾಧ್ಯಮದೊಂದಿಗೆ ಮಾತನಾಡಿದ ಪಕ್ಷೇತರ ಶಾಸಕ ಕೆ ಹೆಚ್ ಪುಟ್ಟಸ್ವಾಮಿಗೌಡ

ದೊಡ್ಡಬಳ್ಳಾಪುರ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಭರವಸೆಗಳ ಜಾರಿಗೆ ವಿಳಂಬವಾಗುತ್ತಿರುವ ಹಿನ್ನೆಲೆ ವಿರೋಧ ಪಕ್ಷಗಳು ಅಕ್ರೋಶ ವ್ಯಕ್ತಪಡಿಸುತ್ತಿವೆ. ಈ ಬೆನ್ನಲ್ಲೇ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾದ ಕೆ.ಹೆಚ್. ಪುಟ್ಟಸ್ವಾಮಿಗೌಡ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರ ಬ್ಯಾಟಿಂಗ್​ ಮಾಡಿದ್ದಾರೆ.

ಕಾರಣ ನಿಮಿತ್ತ ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಾಕುತ್ತಿರುವ ಷರತ್ತುಗಳನ್ನು ಸಮರ್ಥನೆ ಮಾಡಿಕೊಂಡರು. ಸರ್ಕಾರದಿಂದ ಸಣ್ಣ ಆದೇಶ ಹೊರಬಿದ್ದರೂ ಅದು ಜಾರಿಯಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಹಾಗೆಯೇ, ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಜನರಿಗೆ ತಲುಪಲು ಸಮಯ ತೆಗೆದುಕೊಳ್ಳುತ್ತದೆ. ಸರ್ಕಾರ ಸಾಧಕ - ಭಾದಕಗಳನ್ನು ನೋಡಿಕೊಂಡು ಯೋಜನೆಗಳನ್ನು ಜಾರಿ ಮಾಡುತ್ತದೆ. ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಯೋಜನೆಗಳು ತಲುಪಬೇಕು, ಆ ಕಾರಣದಿಂದ ಷರತ್ತುಗಳನ್ನ ಹಾಕುವುದು ಒಳ್ಳೆಯದೇ ಎಂದರು.

"ಬಿಟ್ಟಿ ಯೋಜನೆಗಳಿಂದ ದೇಶ ದಿವಾಳಿಯಾಗುವುದಾಗಿ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಕೇಂದ್ರ ಸರ್ಕಾರವೇ ಒಂದು ಕಾನೂನು ಮಾಡಿ ಯಾವ ರಾಜ್ಯದಲ್ಲೂ ಬಿಟ್ಟಿ ಯೋಜನೆಗಳನ್ನು ಜಾರಿ ಮಾಡ ಬಾರದು ಎಂದು ಆದೇಶ ಮಾಡಲಿ. ವೋಟಿಗಾಗಿ ಕೆಲವು ರಾಜ್ಯಗಳಲ್ಲಿ ಜನಪ್ರಿಯ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಸಹ ಕೃಷಿ ಸನ್ಮಾನ್ ಯೋಜನೆಯಲ್ಲಿ ರೈತರಿಗೆ ಹಣ ಹಾಕುತ್ತಿದೆ" ಎಂದರು.

ಇನ್ನು ಕೆ.ಹೆಚ್.ಪುಟ್ಟಸ್ವಾಮಿಗೌಡರು ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಅವರನ್ನು 40 ಸಾವಿರ ಮತಗಳಿಂದ ಪರಾಭವಗೊಳಿಸಿದ್ದಾರೆ. ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸಹ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ಮಾಜಿ ಸಚಿವರೊಂದಿಗಿನ ಹೊಂದಾಣಿಕೆ ಬಗ್ಗೆ ಪ್ರಶ್ನೆ ಮಾಡಿದ್ದಾಗ ಉತ್ತರಿಸಿದ ಅವರು, ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರು ಬೇರೆ ಬೇರೆಯಾಗಿಯೇ ಇದ್ದಾರೆ, ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕಾರ್ಯಕ್ರಮಗಳಿಗೆ ನನ್ನ ಬೆಂಬಲ ಇದೆ. ಕ್ಷೇತ್ರದಲ್ಲಿ 5 ಬಾರಿ ಗೆದ್ದಿರುವ ಶಿವಶಂಕರ್ ರೆಡ್ಡಿ ಅವರು ನಮ್ಮ ಆಡಳಿತದಲ್ಲಿ ಮೂಗು ತೂರಿಸುವ ಅಥವಾ ಅಧಿಕಾರಿಗಳಿಗೆ ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು. ಒಂದು ವೇಳೆ ನಮ್ಮ ಆಡಳಿತದಲ್ಲಿ ಮೂಗು ತೂರಿಸಿದಲ್ಲಿ ತಕ್ಕ ಉತ್ತರ ನೀಡುವುದಾಗಿ ಹೇಳಿದರು.

ಇದನ್ನೂ ಓದಿ : Congress guarantees: ಪಂಚ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುವೆ : ಶಾಸಕ ಪ್ರದೀಪ್​ ಈಶ್ವರ್​

ಶಾಸಕ ಪ್ರದೀಪ್ ಈಶ್ವರ್ ಭರವಸೆ : ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್ ಹಾಗೂ ಮನೆ ಯಜಮಾನಿಗೆ 2 ಸಾವಿರ ಹಣ, 10 ಕೆ.ಜಿ ಅಕ್ಕಿ ವಿತರಣೆ, ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದ ಜನತೆಗೆ ಭರವಸೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.