ದೊಡ್ಡಬಳ್ಳಾಪುರ : ಅತಿ ವೇಗದಿಂದ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿ ಸರ್ಕಲ್ ಬಳಿ ನಡೆದಿದೆ.
ದೊಡ್ಡ ತುಮಕೂರಿನ ನಿವಾಸಿ ಶಿವಕುಮಾರ್ ಮೃತಪಟ್ಟವರು. ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಅತಿ ವೇಗವಾಗಿ ಕೆಎಸ್ಆರ್ಟಿಸಿ ಬಸ್ ಚಲಿಸುತ್ತಿತ್ತು, ಈ ವೇಳೆ ಮುಂಭಾಗದಲ್ಲಿ ಬೈಕ್ ಹೋಗುತ್ತಿದ್ದಾಗ ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಹಿಂಭಾಗ ಬೈಕ್ ಗೆ ತಗುಲಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಬಿದ್ದು ಮೃತಪಟ್ಟಿದ್ದಾನೆ.
ಈಗಾಗಲೇ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.