ಬೆಂಗಳೂರು: ರೈತರ ಸಾಲ ಮನ್ನಾ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮಾಡಿದ್ದ ಟ್ವೀಟ್ ಆರೋಪಕ್ಕೆ ಇದೀಗ ಮುಖ್ಯಮಂತ್ರಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದು, ರೈತರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರೈತರ ಸಾಲ ಮನ್ನಾ ವಿಷಯವಾಗಿ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
-
2/2
— CM of Karnataka (@CMofKarnataka) February 28, 2020 " class="align-text-top noRightClick twitterSection" data="
ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.
">2/2
— CM of Karnataka (@CMofKarnataka) February 28, 2020
ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.2/2
— CM of Karnataka (@CMofKarnataka) February 28, 2020
ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.
ರೈತರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದಿರುವ ಯಡಿಯೂರಪ್ಪ, ಸೂಕ್ತ ದಾಖಲೆ ಸಲ್ಲಿಸುವ ಎಲ್ಲ ರೈತರ ಸಾಲ ಮನ್ನಾ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ. ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.
ಇದಕ್ಕೂ ಮುಂಚಿತವಾಗಿ ಟ್ವೀಟ್ ಮಾಡಿದ್ದ ಹೆಚ್ಡಿಕೆ 'ರೈತರ ಸಾಲ ಮನ್ನಾ' ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ.
-
ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ.
— H D Kumaraswamy (@hd_kumaraswamy) February 28, 2020 " class="align-text-top noRightClick twitterSection" data="
3/3
">ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ.
— H D Kumaraswamy (@hd_kumaraswamy) February 28, 2020
3/3ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ.
— H D Kumaraswamy (@hd_kumaraswamy) February 28, 2020
3/3
ದಾಖಲೆಗಳ ನೆಪವೊಡ್ಡಿ ಸಾಲ ಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ ಎಂದಿದ್ದರು.