ಬೆಂಗಳೂರು: ಎರಡೂ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಮಹದಾಯಿ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್ವೈ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ನೆಲ, ಜಲ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಬೆಂಡಾಗುವುದಿಲ್ಲ. ಎರಡೂ ರಾಜ್ಯದ ಅಧಿಕಾರಿಗಳೊಂದಿಗೆ ಮಾತನಾಡಿ, ರಾಜಕೀಯವಾಗಿ ನಾವು ಕೆಲವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಚುನಾವಣೆಯಲ್ಲಿ ಇವೆಲ್ಲ ಕಾಮನ್: ಚುನಾವಣೆ ಸಮಯದಲ್ಲಿ ಈ ರೀತಿಯ ಹೇಳಿಕೆ ನೀಡುವುದು ಕಾಮನ್. ಅದೇ ರೀತಿ ಸಿದ್ದರಾಮಯ್ಯನವರು ಒಂದು ಕಡೆ ನೀರು ಬಿಡುವುದಾಗಿ, ಇನ್ನೊಂದು ಕಡೆ ಬಿಡಲು ಆಗಲ್ಲ ಎಂದು ಹೇಳಿದ್ದಾರೆ. ಅವುಗಳನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.