ದೊಡ್ಡಬಳ್ಳಾಪುರ : ಬೈಕ್ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ತಮ್ಮ ಮೃತಪಟ್ಟಿದ್ದು, ಅಣ್ಣನಿಗೆ ಗಂಭೀರ ಗಾಯವಾಗಿರುವ ಘಟನೆ ದೊಡ್ಡಬಳ್ಳಾಪುರದ ತಿಪ್ಪೂರು ಗ್ರಾಮದ ಕೆರೆ ಏರಿ ಮೇಲೆ ಸಂಭವಿಸಿದೆ. ಜಗದೀಶ್ (24) ಎಂಬುವರು ಮೃತದುರ್ದೈವಿಯಾಗಿದ್ದು, ಮುನಿರಾಜು ಎಂಬುವರ ತಲೆಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಗದೀಶ್, ಮುನಿರಾಜು ಸಹೋದರರಾಗಿದ್ದು, ಬೆಳಗ್ಗೆ ಕೆಲಸಕ್ಕೆಂದು ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಕೆರೆ ಏರಿಯ ಇಳಿಜಾರಿನಲ್ಲಿ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಏಕಾಏಕಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ.. ಕಾರಣ ನಿಗೂಢ!