ETV Bharat / state

ನಿಜಗಲ್ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಡಾ. ಶ್ರೀನಿವಾಸಮೂರ್ತಿ - Bangalore Rural News

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಳೆ ನಿಜಗಲ್ ಚೆಕ್ ಪೋಸ್ಟ್​ಗೆ ಶಾಸಕ ಡಾ. ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಅನವಶ್ಯಕವಾಗಿ ನಗರಕ್ಕೆ ಬರುವ ವಾಹನಗಳನ್ನು ತಡೆ ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

MLA Dr Srinivasamoorthy  visit Nijagal Check Post
ನಿಜಗಲ್ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಡಾ.ಶ್ರೀನಿವಾಸಮೂರ್ತಿ
author img

By

Published : Jul 17, 2020, 6:41 PM IST

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಹಳೆ ನಿಜಗಲ್ ಚೆಕ್​​ಪೋಸ್ಟ್​ಗೆ ಶಾಸಕ ಡಾ. ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಜಗಲ್ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಡಾ.ಶ್ರೀನಿವಾಸಮೂರ್ತಿ

ನಿಜಗಲ್ ಚೆಕ್ ಪೋಸ್ಟ್​ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಗಡಿಯಾಗಿದ್ದು, ಇಲ್ಲಿನ ಕಾರ್ಯವಿಧಾನಗಳ ಬಗ್ಗೆ ಪೊಲೀಸರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೆ, ಅನವಶ್ಯಕವಾಗಿ ನಗರಕ್ಕೆ ಬರುವ ವಾಹನಗಳನ್ನು ತಡೆ ಹಿಡಿಯುವಂತೆ ಸೂಚಿಸಿದರು. ಬಳಿಕ ಮಾತನಾಡಿದ ಅವರು, ನಿನ್ನೆ (ಗುರುವಾರ) ಒಂದೇ ದಿನ ತಾಲೂಕಿನ 40 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರ ಚಿಕಿತ್ಸೆಗಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸೋಂಕಿತರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆ, ಸಿದ್ಧಾರ್ಥ ಮೆಡಿಕಲ್ ಕಾಲೇಜು, ವಿಕ್ಟೋರಿಯಾ ಮತ್ತು ಜಿಕೆವಿಕೆಗೂ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ದೇವರ ದಯೆಯಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.