ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಚುನಾವಣೆಯಲ್ಲಿ ಸ್ವರ್ಥಿಸಿದ್ದ ತಾಯಿ-ಮಗಳು ಗೆಲುವು ಸಾಧಿಸುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ತಾಯಿ ನಂಜಮ್ಮ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿ ಕ್ಷೇತ್ರದಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮಗಳು ಪವಿತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ತಪಸಿಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಕಂಟನಕುಂಟೆ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿದ್ದಾರೆ.