ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವಿಧಾನಸಭಾ ಚುನಾವಣೆ ಮುಗಿದಿದ್ದರು ಹೊಸಕೋಟೆಯಲ್ಲಿ ರಾಜಕೀಯ ವೈಷಮ್ಯ ಇನ್ನೂ ಮುಂದುವರೆದಿದೆ. ಫಲಿತಾಂಶ ಬಂದ ದಿನವೇ ಪಟಾಕಿ ಸಿಡಿಸಿದ ವಿಚಾರಕ್ಕೆ ವ್ಯಕ್ತಿಯೊಬ್ಬನ ಕೊಲೆ ನಡೆದಿತ್ತು. ಇಂದು ಬೆಳಗ್ಗೆ ನಗರದ ಪಾರ್ವತಿಪುರದ ಸರ್ಕಲ್ನಲ್ಲಿ ಅಳವಡಿಸಿದ್ದ ಎಂಟಿಬಿ ವೃತ್ತದ ಬೋರ್ಡ್ ಅನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ಧ್ವಂಸದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊಸಕೋಟೆ ಕ್ಷೇತ್ರದ ವಿಜೇತ ಅಭ್ಯರ್ಥಿ ಶರತ್ ಬಚ್ಚೇಗೌಡ ಮತ್ತು ಮಾಜಿ ಸಚಿವ ಎಂಟಿಬಿ ನಾಗರಾಜ್ ನಡುವಿನ ವೈಯಕ್ತಿಕ ಕದನಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಚುನಾವಣೆಯ ಸಮಯದಲ್ಲಿ ಇಬ್ಬರ ನಡುವೆ ವಾಕ್ಸಮರ ನಡೆದಿತ್ತು. ಚುನಾವಣೆಯ ನಂತರ ಇದು ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿದೆ.
ಮೇ 13 ರಂದು ಡಿ. ಶೆಟ್ಟಹಳ್ಳಿಯಲ್ಲಿ ಕೊಲೆ ನಡೆದಿತ್ತು. ಮನೆಯ ಮುಂದೆ ಪಟಾಕಿ ಸಿಡಿಸಿದ ವಿಚಾರಕ್ಕೆ ದಾಯಾದಿ ಕುಟುಂಬಗಳ ನಡುವೆ ಕಾದಾಟದಲ್ಲಿ ಕೃಷ್ಣಪ್ಪ ಎಂಬ ವ್ಯಕ್ತಿ ಕೊಲೆಯಾಗಿದ್ದರು. ಈಗ ಎಂಟಿಬಿ ಬೋರ್ಡ್ ಧ್ವಂಸ ಮಾಡಿರುವುದು ಸ್ಥಳೀಯರ ಆತಂಕ್ಕೆ ಕಾರಣವಾಗಿದೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಘಟನೆಯನ್ನ ಖಂಡಿಸಿ ಇಂದು ಬೆಳಗ್ಗೆ 11 ಗಂಟೆಗೆ ಎಂಟಿಬಿ ನಾಗರಾಜ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಬೆಳಗಾವಿಯಲ್ಲಿ ಆಕ್ಷೇಪಾರ್ಹ ಘೋಷಣೆ: ಸ್ವಯಂಪ್ರೇರಿತ ಪ್ರಕರಣ ದಾಖಲು