ದೇವನಹಳ್ಳಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್‌ಐಟಿ ತಂಡ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದೆ. ತನಿಖೆಯಲ್ಲಿ ಯಾರೂ ಮೂಗು ತೂರಿಸುವ ಮತ್ತು ರಾಜಕೀಯ ಒತ್ತಡ ಹಾಕುವ ಪರಿಸ್ಥಿತಿ ಉಂಟಾಗುವುದಿಲ್ಲ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಹೇಳಿದ್ರು.
ಈ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಈಗಾಗಲೇ ಅರ್ಧ ತನಿಖೆ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ವಿಚಾರಣೆಗೆ ಎಸ್‌ಐಟಿ ಇನ್ನೂ ನೋಟಿಸ್ ನೀಡಿಲ್ಲ. ಅಷ್ಟರಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಬಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವುದು ಮಾಧ್ಯಮದಿಂದ ನನಗೆ ಗೊತ್ತಾಯ್ತು ಎಂದರು.
ಎಸ್‌ಐಟಿ ತಂಡ ಕೇವಲ ಸಂತ್ರಸ್ತೆಯನ್ನು ವಿಚಾರಣೆ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ಮಾಡಬೇಕು. ಇದರಲ್ಲಿ ಯಾರೇ ತಪ್ಪು ಮಾಡಿದ್ರೂ ಅವರು ವಿರುದ್ಧ ಕಾನೂನಿನ ಚೌಕಟ್ಟಿನೊಳಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ..