ದೇವನಹಳ್ಳಿ: ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ಶ್ರೀ ರಾಮ ಮಂದಿರದ ಶಿಲಾನ್ಯಾಸ ಮತ್ತು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪ್ರಯಾಣ ಬೆಳೆಸಿದ್ದಾರೆ.
ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದ ಹಲವು ಸಾಧು ಸಂತರಿಗೆ ಆಹ್ವಾನ ಬಂದಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟೀಯ ವಿಮಾನ ನಿಲ್ದಾಣದಿಂದ ಶ್ರೀಗಳು ಅಯೋಧ್ಯಾಗೆ ತೆರಳಿದ್ದಾರೆ.
ಚಿತ್ರದುರ್ಗದ ಬಸವಮೂರ್ತಿ ಮಾದರ ಚನ್ನಯ್ಯ ಶ್ರೀಗಳಿಗೂ ಆಹ್ವಾನ ಬಂದಿದ್ದು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾರೆ.