ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ - ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ದೇವನಹಳ್ಳಿ ಹೊರವಲಯದ ರಾಷ್ಟ್ರಿಯ ಹೆದ್ದಾರಿ 7 ರ ಕೋಟೆ ಬಳಿ ಘಟನೆ ನಡೆದಿದ್ದು, ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರನ ಅಂಗಾಗ ಛಿದ್ರವಾಗಿದೆ
ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.