ETV Bharat / state

ನೆಲಮಂಗಲ: ಪಿಡಿಒ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

author img

By

Published : Feb 17, 2023, 6:26 AM IST

ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಡಿಓ ಮತ್ತು ಬಿಲ್ ಕಲೆಕ್ಟರ್
ಪಿಡಿಓ ಮತ್ತು ಬಿಲ್ ಕಲೆಕ್ಟರ್

ನೆಲಮಂಗಲ : ಕಾಮಗಾರಿ ಬಿಲ್ ಪಡೆಯಲು ಗುತ್ತಿಗೆದಾರನಿಂದ 25 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಒ ಮತ್ತು ಬಿಲ್ ಕಲೆಕ್ಟರ್​ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಉಷಾ ಮತ್ತು ಬಿಲ್ ಕಲೆಕ್ಟರ್ ಪುಟ್ಟಸ್ವಾಮಿ ಕಾಮಾಗಾರಿಯ ಬಿಲ್ಲು ಮಾಡಲು ಗುತ್ತಿಗೆದಾರನಿಂದ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಗುತ್ತಿಗೆದಾರನಿಂದ ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗಿರೀಶ್ ಎಂಬ ಗುತ್ತಿಗೆದಾರ ಟಿ. ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿ. ಸಿ ಡ್ರೈನ್ ಕಾಮಗಾರಿಯನ್ನ ಮಾಡಿದ್ರು. ಕಾಮಗಾರಿಯ ಹಣವನ್ನು ಪಡೆಯಲು ಪಿಡಿಓ ಅವರಿಂದ ಬಿಲ್ಲನ್ನು ಪಡೆಯಬೇಕಿತ್ತು. ಕಾಮಗಾರಿಯ ಬಿಲ್ಲು ಮಾಡಿಕೊಡುವಂತೆ ಪಿಡಿಒ ಉಷಾ ಮತ್ತು ಬಿಲ್ ಕಲೆಕ್ಟರ್ ಪುಟ್ಟಸ್ವಾಮಿಯನ್ನ ಭೇಟಿ ಮಾಡಿದ್ರು. ಪಿಡಿಒ ಉಷಾ ಬಿಲ್ ಕಲೆಕ್ಟರ್ ಮೂಲಕ 25 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ರು. ಗುತ್ತಿಗೆದಾರ ಗಿರೀಶ್ ಲಂಚದ ಹಣದ ಬೇಡಿಕೆ ಇಟ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು, ಗಿರೀಶ್ ಅವರ ದೂರಿನ ಆಧಾರ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ಲೋಕಾಯುಕ್ತ ಬಿ ಎಸ್ ಪಾಟೇಲರ ಸೂಚನೆಯಂತೆ ಕರ್ನಾಟಕ ಲೋಕಾಯುಕ್ತದ ಅಪರ ಪೊಲೀಸ್ ಮಹಾ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಹಾಗೂ ಪೊಲೀಸ್ ಅಧೀಕ್ಷರಾದ ಮಾಹದೇವ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ಎಂ. ಶ್ರೀನಿವಾಸ್ ನೇತೃತ್ವದ ಲೋಕಾಯುಕ್ತ ತಂಡ ದಾಳಿ ನಡೆಸಿತು.

ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಹಾಗೂ ನಗರ ಯೋಜನಾಧಿಕಾರಿ ಲೋಕಾಯುಕ್ತ ಬಲೆಗೆ: ಎರಡು ಲಕ್ಷ ಲಂಚ ಸ್ವೀಕರಿಸುವ ವೇಳೆ ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಹಾಗೂ ನಗರ ಯೋಜನಾಧಿಕಾರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಮಂಜು ಕೆ ಆರ್ ಹಾಗೂ ನಗರ ಯೋಜನಾಧಿಕಾರಿ ಭರತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದು, ದಾವಣಗೆರೆ ನಗರದ ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಖೆಡ್ಡಾಕ್ಕೆ ಕೆಡವಿದ್ದಾರೆ. ಖಾಸಗಿ ಲೇ ಔಟ್ ವೊಂದರ ಮಾಡಲು ಪರವಾನಗಿ ನೀಡಲು ಮೂರು ಲಕ್ಷ ಲಂಚಕ್ಕೆ ಅಧಿಕಾರಿಗಳಿಬ್ಬರು ಬೇಡಿಕೆ ಇಟ್ಟಿದ್ದರು.

ಈಗಾಗಲೇ ಭರತ್ ಹಾಗೂ ಮಂಜುನಾಥ್ ಇಬ್ಬರು ಒಂದು ಲಕ್ಷ ಹಣವನ್ನು ಮುಂಗಡವಾಗಿ ಪಡೆದಿದ್ದರು. ಇಂದು ಎರಡು ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಬಳಿ ಲೇ ಔಟ್ ಮಾಡುತ್ತಿದ್ದ ಶ್ರೀನಿವಾಸ ಎಂಬುವರಿಂದ ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ಪೊಲೀಸರು ಟ್ರ್ಯಾಪ್ ಮಾಡಿ ಬಲೆಗೆ ಬೀಳಿಸಿದ್ದಾರೆ.

ಇನ್ನು ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ‌ಲೋಕಾಯುಕ್ತ ತಂಡ ಇನ್ಸ್​ಪೆಕ್ಟರ್​ಗಳಾದ ಆಂಜನೇಯ ಹಾಗೂ ರಾಷ್ಟ್ರಪತಿ ಅವರಿಂದ ದಾಳಿ ನಡೆಸಲಾಗಿತ್ತು.

ಓದಿ : ಎಇಇ ಸೇರಿ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.