ETV Bharat / state

ದೊಡ್ಡಬಳ್ಳಾಪುರದಲ್ಲಿ ಹುಡುಗ ಹುಡುಗಿ ಮೇಲೆ ಹಲ್ಲೆ ಆರೋಪ: ಪ್ರಕರಣದ ದಾಖಲು - ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ

ದೊಡ್ಡಬಳ್ಳಾಪುರ ನಗರದಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ಹುಡುಗ ಹುಡುಗಿಯನ್ನು ಕಂಡಿರುವ ಸ್ಥಳೀಯರು ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಹುಡುಗ ಹುಡುಗಿ ಮೇಲೆ ಹಲ್ಲೆ

author img

By

Published : Sep 28, 2022, 6:13 PM IST

ದೊಡ್ಡಬಳ್ಳಾಪುರ: ಹುಡುಗ ಹುಡುಗಿ ಜೊತೆಯಾಗಿ ಬೈಕ್​ನಲ್ಲಿ ಹೋಗುತ್ತಿರುವುದನ್ನ ಕಂಡ ಪುಂಡರ ಗ್ಯಾಂಗ್ ಇಬ್ಬರ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಹುಡುಗ ಹುಡುಗಿ ಮೇಲೆ ಹಲ್ಲೆ

ದೊಡ್ಡಬಳ್ಳಾಪುರ ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಣರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸೆಪ್ಟೆಂಬರ್ 25ರ ಭಾನುವಾರ ಮಧ್ಯಾಹ್ನ 1:30 ಸಮಯದಲ್ಲಿ ಬೈಕ್​​​ನಲ್ಲಿ ಹುಡುಗ ಹುಡುಗಿ ಜೊತೆಯಲ್ಲಿ ಹೋಗುತ್ತಿದ್ದರು. ಇದೇ ವೇಳೆ, ನಗರದ ಇಸ್ಲಾಂಪುರದ ನಿವಾಸಿ ಹುಜೂರ್ ಮತ್ತು ಆತನ ಸ್ನೇಹಿತರು ಬೈಕ್ ಅಡ್ಡಗಟ್ಟಿದ್ದಾರೆ. ಬೈಕ್​ನಲ್ಲಿದ್ದ ಇಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ದಾಖಲು: ಹಲ್ಲೆ ನಡೆಸಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಹಿನ್ನಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪುಂಡರ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಪಿಎಸ್ಐ ಹಗರಣ: ಅಮೃತ್ ಪಾಲ್ ವಿರುದ್ಧ 1406 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.