ನೆಲಮಂಗಲ: ಡಾಬಾಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಾಬಸ್ ಪೇಟೆ ಪೊಲೀಸರು ಗಾಂಜಾ ಸಮೇತ ಸೆರೆ ಹಿಡಿದಿದ್ದಾರೆ.
ನೆಲಮಂಗಲ ತಾಲೂಕು ಸೋಂಪುರ ಹೋಬಳಿ ಡಾಬಸ್ಪೇಟೆಯ ಶಿವಗಂಗೆ ಸರ್ಕಲ್ ಹತ್ತಿರವಿರುವ ಡಾಬಾದಲ್ಲಿ 28 ವರ್ಷದ ಅಶೋಕ್ ಶರ್ಮಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಡಾಬಾಗಳಿಗೆ ಬರುವ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗ್ತಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 210 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಠಾಣೆಯ ನಿಬ್ಬಂದಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.