ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರ ಹಟ್ಟಿಯ ಖಾಲಿ ನಿವೇಶನದಲ್ಲಿ ಇಸ್ಪೀಟ್ ಆಡುತ್ತಿದ್ದ ಜೂಜುಕೋರರನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಸ್ಪೀಟ್ ಆಡುತ್ತಿದ್ದವರ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಡಿವೈಎಸ್ಪಿ ಪಾಂಡುರಂಗ ನೇತೃತ್ವದದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಮಿಂಚಿನ ದಾಳಿ ನಡೆಸಿ 11 ಜೂಜುಕೋರರನ್ನ ವಶಕ್ಕೆ ಪಡೆದಿದ್ದಾರೆ.
ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ವೈನ್ಸ್ ಲೋಕೇಶ್ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ. ಜೊತೆಗೆ
60,000 ನಗದು, 11 ಮೊಬೈಲ್, 4 ಬೈಕ್ ವಶಕ್ಕೆ ಪಡೆಯಲಾಗಿದೆ.