ದೊಡ್ಡಬಳ್ಳಾಪುರ: ರಾಜ್ಯಾದ್ಯಂತ ಪೊಲೀಸರು ಏಕ ಕಾಲದಲ್ಲಿ ಪಿಎಫ್‌ಐ ನಾಯಕರು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ, ಹೊಸಕೋಟೆ ಸೇರಿದಂತೆ ಒಟ್ಟು 9 ಮಂದಿ ಪಿಎಫ್‌ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ಪೊಲೀಸರು ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಪಿಎಫ್‌ಐ ಸಂಘಟನೆಗಳಲ್ಲಿ ತೊಡಗಿದ್ದ ಮೂವರು ಹಾಗೂ ವಿಜಯಪುರ, ಹೊಸಕೋಟೆ ಸೇರಿದಂತೆ 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ(NIA) ದೇಶ-ವಿದೇಶಗಳಿಂದ ದೇಣಿಗೆ ಸಂಗ್ರಹಿಸುತ್ತಿರುವ ಆರೋಪದ ಮೇರೆಗೆ ದೇಶದ ಹಲವು ರಾಜ್ಯದಲ್ಲಿನ ಎಸ್ಡಿಪಿಐ(ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಮತ್ತು ಪಿಎಫ್‌ಐ(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮುಖಂಡರ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದರು.
ಈ ವೇಳೆ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಇವರ ಮೇಲೆ ಅನುಮಾನ ವ್ಯಕ್ತವಾದ ಹಿನ್ನೆಲೆ ರಾಜ್ಯ ಪೊಲೀಸರು ಇಂದು ಹಲವು ಜಿಲ್ಲೆಗಳಲ್ಲಿ ಪಿಎಫ್‌ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿ 40ಕ್ಕೂ ಜನರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ರಾಜ್ಯಾದ್ಯಂತ ಪೊಲೀಸರ ಮಿಂಚಿನ ಕಾರ್ಯಾಚರಣೆ.. 40ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರು ವಶಕ್ಕೆ