ಬೆಂಗಳೂರು: ದೊಡ್ಡಬಳ್ಳಾಪುರ ಹೊರವಲಯದ ಪಾಲಿನಜೋಗಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮೂರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿದ್ದಾಳೆ.
ಗಿರಿಜಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ವರದಕ್ಷಿಣೆ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.
ಗೌರಿಬಿದನೂರಿನ ಗೆದರೆಯ ಗಿರಿಜಾ 3 ವರ್ಷಗಳ ಹಿಂದೆ ಮಹೇಂದ್ರ ಎಂಬುವನ ಜೊತೆ ಮದುವೆಯಾಗಿದ್ದಳು. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಮಹೇಂದ್ರ ತನ್ನ ಪತ್ನಿ ಗಿರಿಜಾ ಜತೆ ಯಾವಾಗಲು ಜಗಳ ಆಡುತ್ತಿದ್ದನಂತೆ. ಈ ಕಾರಣಕ್ಕಾಗಿಯೇ ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.