ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆಗೆ ನಡೆದ ಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.
ನೆಲಮಂಗಲದ ಜೂನಿಯರ್ ಕಾಲೇಜು ಮತ್ತು ದೇವನಹಳ್ಳಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಮತಎಣಿಕೆ ಕಾರ್ಯ ನಡೆಯಲಿದೆ.
ನಾಳೆ ಬೆಳಗ್ಗೆ 6.00 ಗಂಟೆಯಿಂದ ಮಂಗಳವಾರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಈ ಸಮಯದಲ್ಲಿ ಮೆರವಣಿಗೆ, ಗುಂಪು ಗುಂಪಾಗಿ ಸೇರುವಿಕೆ, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.