ಬೆಂಗಳೂರು: ಕಂಟೈನರ್ ವಾಹನದಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಸಾಮಾಜಿಕ ಸ್ವಯಂ ಸೇವಾ ಸಂಸ್ಥೆಯ ಸಹಾಯದಿಂದ ಆರ್ ಎಂ ಸಿ ಯಾರ್ಡ್ ಪೊಲೀಸರು ರಕ್ಷಿಸಿದ್ದಾರೆ.
ತುಮಕೂರು ರಸ್ತೆಯ ಗೋರಗುಂಟೆಪಾಳ್ಯದ ಸಿಎಂಟಿಐ ಬಳಿ ಕಂಟೈನರ್ ವಾಹನವನ್ನು ಇಂದು ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಪೊಲೀಸರು ಅಡ್ಡಗಟ್ಟಿದ್ದಾರೆ. ಈ ವೇಳೆ ಡ್ರೈವರ್ ಓಡಿ ಹೋಗಿದ್ದು, ವಾಹನದಲ್ಲಿದ್ದ ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 30 ಗೋವುಗಳನ್ನು ಒಂದೇ ವಾಹನದಲ್ಲಿ, ಅತ್ಯಂತ ಕ್ರೂರ ರೀತಿಯಲ್ಲಿ ಒಂದರ ಮೇಲೊಂದು ಕಟ್ಟಿಹಾಕಿ ಸಾಗಿಸುತ್ತಿದ್ದರು ಎನ್ನಲಾಗ್ತಿದೆ.
ಈ ಗೋವುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಶಿವಾಜಿನಗರದ ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಒಟ್ಟು ಮೂರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.