ದೊಡ್ಡಬಳ್ಳಾಪುರ: ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿರುವ ಮಾಹಿತಿ ಮೇರೆಗೆ ಹಸುಗಳನ್ನು ಸಂರಕ್ಷಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ನಗರದ ಜಾಲಪ್ಪ ಕಾಲೇಜು ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಮಾಹಿತಿಯನ್ನು ನಗರದ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಾಹಿತಿಯ ಮೇರೆಗೆ ಪೊಲೀಸರು ಹಸುಗಳ ರಕ್ಷಣೆ ಮಾಡಿದ್ದಾರೆ.
ದಾಸ್‍ಪೇಟೆಯಿಂದ ನಗರದ ಇಸ್ಲಾಂಪುರದ ಕಸಾಯಿಖಾನೆಗೆ ಅಕ್ರಮವಾಗಿ 2 ಹಸು ಹಾಗೂ 4 ಕರುಗಳನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸು ಮತ್ತು ಕರುಗಳು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕನನ್ನು ವಶಕ್ಕೆ ಪಡೆದ ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.