ETV Bharat / state

ಹಣ ವಸೂಲಿಗೆ ನಿಂತ ವೈದ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ - Protest Anekal

ಹಣ ಸುಲಿಗೆಗೆ ನಿಂತ ವೈದ್ಯಾಧಿಕಾರಿಗಳ ವಿರುದ್ಧ ಆನೇಕಲ್​ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Protest against doctors in Anekal
ವೈದ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ
author img

By

Published : Aug 11, 2020, 9:50 PM IST

ಆನೇಕಲ್: ಕೆಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೋವಿಡ್-19 ಭೀತಿಯಿಂದ ಬಡವರಿಂದ ಹಣ ಸುಲಿಗೆ ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ವೈದ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ

ಇಲ್ಲಿನ ಸರ್ಕಾರಿ ಆಸ್ಪತ್ರೆ ಎದುರು ತಾಲೂಕು ವೈದ್ಯಾಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿದ ದಸಂಸ ಮುಖಂಡರು, ಜಿಗಣಿಯ ಸುಹಾಸ್ ಆಸ್ಪತ್ರೆಯಲ್ಲಿ ಒಂದು ಸಣ್ಣ ಗಾಯಕ್ಕೂ ಕೋವಿಡ್ -19 ಪರೀಕ್ಷೆ ಕಡ್ಡಾಯ ಮಾಡಿದ್ದಾರೆ. ಅದಕ್ಕಾಗಿ ಮುಂಗಡವಾಗಿ ಅವರಿಂದ 25 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ.

ಓರ್ವ ಹೆಣ್ಣು ಮಗು ನಾಲಿಗೆ ಕಚ್ಚಿಕೊಂಡು ರಕ್ತ ಸುರಿಯುತ್ತಿದ್ದರೂ ಆಸ್ಪತ್ರೆಯ ವೈದ್ಯರು ಸಭೆಯಲ್ಲಿ ಮಗ್ನರಾಗಿದ್ದು 25 ಸಾವಿರ ಹಣವಿಲ್ಲದಿದ್ದರೆ ಬರಬೇಡಿ ಎಂದು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.