ETV Bharat / state

ಸೇವಾ ಭದ್ರತೆಗಾಗಿ ಒತ್ತಾಯ: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಪ್ರತಿಭಟನೆ - ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ

ಕಳೆದ ಹದಿನಾರು ವರ್ಷಗಳಿಂದ ನಾವು ಸೇವಾ ಭದ್ರತೆ, ಸಮಾನ ವೇತನ ಇಲ್ಲದೆ ಕೆಲಸ ಮಾಡುತ್ತಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶವಿದ್ದರೂ ಆಳುವ ಸರ್ಕಾರಗಳ ಮುಂದೆ ನಮ್ಮ ನ್ಯಾಯಯುತ ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದೇವೆ ಎಂದರು.

Protest by Health Department's contract employees at Doddabellapura
ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಪ್ರತಿಭಟನೆ.
author img

By

Published : May 12, 2020, 5:55 PM IST

ದೊಡ್ಡಬಳ್ಳಾಪುರ : ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆಗಾಗಿ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಸಾರ್ವಜನಿಕ ಆಸ್ಫತ್ರೆಯ ನೌಕರರು, ಭಾರತೀಯ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘ, ಭಾರತೀಯ ಮಜ್ದೂರ್ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಿದರು.

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಪ್ರತಿಭಟನೆ
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಾದ ಕೆ.ಹೆಚ್.ರಾಜೇಂದ್ರ, ಲಾಕ್​ಡೌನ್​​ ಸಂದರ್ಭದಲ್ಲೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುತ್ತಿದ್ದೇವೆ. ಕಳೆದ ಹದಿನಾರು ವರ್ಷಗಳಿಂದ ನಾವು, ಸೇವಾ ಭದ್ರತೆ, ಸಮಾನ ವೇತನ ಇಲ್ಲದೆ ಕೆಲಸ ಮಾಡುತ್ತಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶವಿದ್ದರೂ ಕಳೆದ ಹತ್ತು ವರ್ಷಗಳಿಂದ ಆಳುವ ಸರ್ಕಾರಗಳ ಮುಂದೆ ನಮ್ಮ ನ್ಯಾಯಯುತ ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದೇವೆ ಎಂದರು.
ಆದ್ರೆ ನಮ್ಮ ಕೂಗನ್ನು ಯಾವುದೇ ಸರ್ಕಾರಗಳು ಪರಿಗಣಿಸುತ್ತಿಲ್ಲ. ಹಾಗಾಗಿ, ಮೇ 23 ರ ವರೆಗೂ ನಮ್ಮ ಈ ಹೋರಾಟ ಇದೇ ರೀತಿ ಮುಂದುವರೆಯುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿವಹಿಸುತ್ತಿರುವ ಡಾ.ದತ್ತುಸಿಂಗ್, ಶ್ರವಣದೋಶ ತಂತ್ರಜ್ಞರಾದ ದಿನೇಶ್, ಸೂಪರ್‌ವೈಸರ್ ದಿನೇಶ್ ಆಶಾರಾಣಿ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.