ETV Bharat / state

'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ'.. ನಾಳೆ ಹೊಸಹಳ್ಳಿಯಲ್ಲಿ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ.. - ಹೊಸಹಳ್ಳಿಯಲ್ಲಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿರುವ ಆರ್.ಅಶೋಕ್

ಸಚಿವರು ದಲಿತರ ಮನೆಗಳಿಗೆ ತೆರಳಿ ಉಪಾಹಾರ ಸೇವಿಸಿ, ನಂತರ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಿದ್ದಾರೆ‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ, ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ..

ಹೊಸಹಳ್ಳಿ
ಹೊಸಹಳ್ಳಿ
author img

By

Published : Feb 19, 2021, 11:13 AM IST

ದೊಡ್ಡಬಳ್ಳಾಪುರ : ತಾಲೂಕಿನ ಹೊಸಹಳ್ಳಿಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ' ಕಾರ್ಯಕ್ರಮದ ಉದ್ಘಾಟನೆಯನ್ನು ಕಂದಾಯ ಸಚಿವ ಆರ್ ಅಶೋಕ್ ಮಾಡಲಿದ್ದು, ಸಚಿವರು ಫೆ.20ರಂದು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ

ಜನರ ಸಮಸ್ಯೆಗಳಿಗೆ ಗ್ರಾಮದಲ್ಲಿಯೇ ಪರಿಹಾರ ನೀಡುವ "ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ" ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುತ್ತದೆ.

ದೊಡ್ಡಬಳ್ಳಾಪುರ ತಾಲೂಕಿನ ಹಿಂದುಳಿದ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಇದೇ ಫೆಬ್ರವರಿ 20ರ ಶನಿವಾರದಂದು ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಸಚಿವರ ಜೊತೆ ರಾಜ್ಯ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಹ ವಾಸ್ತವ್ಯ ಮಾಡಲಿದ್ದಾರೆ.

ಸಚಿವರು ದಲಿತರ ಮನೆಗಳಿಗೆ ತೆರಳಿ ಉಪಾಹಾರ ಸೇವಿಸಿ, ನಂತರ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಿದ್ದಾರೆ‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ, ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಿಂಚಣಿ ಮಂಜೂರು ಮಾಡಲಾಗುವುದು. ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಲಾಗುವುದು, ಆಧಾರ್ ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಹದ್ದುಬಸ್ತು ಪೋಡಿ ಬಗ್ಗೆ ಮಾಹಿತಿ ನೀಡಲಾಗುವುದು. ಜೊತೆಗೆ ಅರ್ಹ ಬಡ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ವಹಿಸಲಾಗುವುದು.

ಇನ್ನು, ಸಚಿವರು ಗ್ರಾಮದಲ್ಲಿ ವಾಸ್ತವ್ಯ ಮಾಡುವ ಕಾರಣ ಗ್ರಾಮ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.