ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗದಲ್ಲಿ ಸಿಲುಕಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಹಾರಿದ ಬಳಿಕ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
![Road Accident](https://etvbharatimages.akamaized.net/etvbharat/prod-images/img-20200827-wa0024_2708newsroom_1598534398_519.jpg)
ಅಪಘಾತಕ್ಕೀಡಾದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಸಂಚಾರಿ ಪೊಲೀಸರು ಹರಸಾಹಸ ಪಡಬೇಕಾಯಿತು.
ಮೃತರನ್ನು ಬೆಂಗಳೂರಿನ ಮಂಜುನಾಥ್ ನಗರದ ಚೇತನ್ (22) ಮತ್ತು ಆದಿ (19) ಎಂದು ಗುರುತಿಸಲಾಗಿದೆ. ಚಂದು (19) ಮತ್ತು ನವೀನ್ (19) ಗಾಯಾಳುಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.