ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ರಾಜ್ಯ ಚುನಾವಣಾ ಪ್ರಚಾರದ ತಂತ್ರ ರೂಪಿಸಲು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ತಾಲೂಕಿನ ವಿಜಯಪುರಕ್ಕೆ ಆಗಮಿಸಲಿರುವ ಅಮಿತ್ ಶಾ, 3 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ 3.15ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ಅಮಿತ್ ಶಾ ಅವರು, ಅಲ್ಲಿಂದ ನೇರವಾಗಿ ವಿಜಯಪುರಕ್ಕೆ ಆಗಮಿಸಲಿದ್ದಾರೆ.
ಇದನ್ನೂ ಓದಿ : 1 ರೂಪಾಯಿ ತೆರಿಗೆಯಲ್ಲಿ 15 ಪೈಸೆ ವಾಪಸ್ ನೀಡುವುದು ಮೋದಿ ಆಶೀರ್ವಾದವೇ?: ಜೆ.ಪಿ.ನಡ್ಡಾಗೆ ಸಿದ್ದರಾಮಯ್ಯ ಪ್ರಶ್ನೆ
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಪರ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ಪಟ್ಟಣದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಜೊತೆಗೆ ಭದ್ರತಾ ಸಿಬ್ಬಂದಿ ಅಮಿತ್ ಶಾ ಸಾಗುವ ಶಿವಗಣೇಶ ಸರ್ಕಲ್ನಿಂದ ಟೋಲ್ ಗೇಟ್ ವರೆಗೂ ಒಂದು ಕೀಮಿ ರೋಡ್ ಶೋ ರಿಹರ್ಸಲ್ ನಡೆಸಿದರು.
ಇದನ್ನೂ ಓದಿ : ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರ: ಪರೋಕ್ಷವಾಗಿ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ
ಇನ್ನೂ ರೋಡ್ ಶೋ ಮಧ್ಯೆ ವಿಜಯಪುರ ಬಸ್ ನಿಲ್ದಾಣ ಬಳಿ 10 ನಿಮಿಷ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಭದ್ರತೆಗೆ 600 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಹೀಗಾಗಿ ವಿಜಯಪುರ ಪಟ್ಟಣಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು ಇಂದಿನ ಭದ್ರತೆ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಇನ್ನು ಇಂದಿನ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಜೊತೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಗೆಲುವಿಗೆ ಅಮಿತ್ ಶಾ ಅವರ ರೋಡ್ ಶೋ ನೆರವಾಗಲಿದೆ. ಅಮಿತ್ ಶಾ ಅವರು ಸುಮಾರು ಎರಡು ಗಂಟೆಗಳ ಕಾಲ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪಿಳ್ಳಮುನಿಶಾಮಪ್ಪ ಅವರು ಅಮಿತ್ ಶಾ ಅವರು ಜಿಲ್ಲೆಗೆ ಎರಡನೇ ಬಾರಿ ಬರುತ್ತಿರುವುದು ಸಂತಸ ವಿಚಾರವಾಗಿದೆ. ಇಂದು 3.25 ಕ್ಕೆ ಸರಿಯಾಗಿ ರೋಡ್ ಶೋ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಯನ್ನು ನಡೆಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : 'ಚು.ಆಯೋಗದ ಮೇಲೆ ನಂಬಿಕೆಯಿಲ್ಲದೇ ಸಹೋದರನಿಂದಲೇ ಡಿಕೆಶಿ ನಾಮಪತ್ರ ಸಲ್ಲಿಕೆ'