ETV Bharat / state

ಫೈನಾನ್ಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದರೋಡೆ - ಫೈನಾನ್ಸ್ ಮಾಲೀಕ ದರೋಡೆ

ಫೈನಾನ್ಸ್​ ಹಣ ಕಲೆಕ್ಷನ್ ಮಾಡಿಕೊಂಡು ಅಂಗಡಿಗೆ ಮರಳುವ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿ ಹಣ, ಮೊಬೈಲ್ ದರೋಡೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

robbers-attacked-a-man-who-works-in-a-finance-company
ಫೈನಾನ್ಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದರೋಡೆ
author img

By

Published : Nov 10, 2021, 10:38 AM IST

ದೊಡ್ಡಬಳ್ಳಾಪುರ (ಬೆಂ.ಗ್ರಾ): ಅಂಗಡಿಗಳಿಂದ ಫೈನಾನ್ಸ್​ ಬಾಕಿ ಹಣ ತೆಗೆದುಕೊಂಡು ಮರಳುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ರೈಲ್ವೆ ಸ್ಟೇಷನ್ ಹತ್ತಿರದ ಮಮತಾ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ ದೂರವಾಣಿನಗರದ ನಿವಾಸಿ ಗೌತಮ್ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಅಂಗಡಿಗಳಿಂದ ಬಾಕಿ ಹಣ ಕಲೆಕ್ಷನ್​​ಗಾಗಿ ಬೈಕ್​ನಲ್ಲಿ ತೆರಳಿದ್ದರು. ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಫೈನಾನ್ಸ್ ಹಣ ಕಲೆಕ್ಷನ್ ಮಾಡಿಕೊಂಡು ಬೆಂಗಳೂರಿನತ್ತ ತೆರಳುವಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ.

ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ 10 ಸಾವಿರ ಮೌಲ್ಯದ ಮೊಬೈಲ್ ಫೋನ್, 5 ಸಾವಿರ ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿಎಂ ಯೋಗಿ ಭೇಟಿಗೂ ಮುನ್ನ ಮೀರತ್​ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಎಲ್ಲಾ ಸ್ಟೇಷನ್​ಗಳಲ್ಲೂ ಕಟ್ಟೆಚ್ಚರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.