ಆನೇಕಲ್/ಹೊಸೂರು: ಸಿನಿಮೀಯ ರೀತಿಯಲ್ಲಿ ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆ ನಡೆದಿದೆ. 7 ಕೋಟಿ ರೂ. ನಗದು ಹಾಗೂ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ತಮಿಳುನಾಡಿನ ಗಡಿ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 9 ಗಂಟೆಗೆ ಹೊಸೂರಿನ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿದ ಕಳ್ಳರು, ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ನನ್ನು ಕಟ್ಟಿ ಹಾಕಿ ಹಣ ದೋಚಿ ಪರಾರಿಯಾಗಿದ್ದಾರೆ.
6 ಮಂದಿ ಖದೀಮರು ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಕಳ್ಳರ ಸೆರೆಗೆ ಬಲೆ ಬೀಸಿದ್ದಾರೆ.