ಬೆಂಗಳೂರು: ನಿಗದಿತ ಕಾಲಮಿತಿಯಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ 'ಸಕಾಲ' ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿವಿಧ ಇಲಾಖೆಗಳಲ್ಲಿ 'ಸಕಾಲ ಸಪ್ತಾಹ' ಆಚರಿಸಲು ಉದ್ದೇಶಿಸಲಾಗಿದೆ.
ಈ ಹಿನ್ನೆಲೆ ಡಿ.12ರಿಂದ ಡಿ.19ರ ವರೆಗೆ ಸಕಾಲ ಸಪ್ತಾಹವನ್ನಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ಕೃಷಿ ಇಲಾಖೆ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ, ವಸತಿ ಇಲಾಖೆ, ಯುವ ಸಬಲೀಕರಣ, ಕ್ರೀಡಾ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಸಹಕಾರ ಇಲಾಖೆ, ಕೌಶಲಾಭಿವೃದ್ಧಿ ಇಲಾಖೆ, ಆರ್ಥಿಕ ಇಲಾಖೆ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ, ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ, ಇಂಧನ, ಕಾನೂನು ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಗಳು ಸೇರಿ 30 ಇಲಾಖೆಗಳಲ್ಲಿ ಸಕಾಲ ಸಪ್ತಾಹ ಆಚರಿಸಲು ಸೂಚಿಸಲಾಗಿದೆ.
ಸಕಾಲ ಸಪ್ತಾಹ ವೇಳೆ ಹೊಸದಾಗಿ ಸ್ವೀಕರಿಸುವ ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕರಲ್ಲಿ ಸಕಾಲ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಲಾಗಿದೆ. ಇನ್ನು ಸಕಾಲ ಸಪ್ತಾಹ ಆಚರಣೆ ಬಗ್ಗೆ ಸಕಾಲ ಮಿಷನ್ ತಂಡ ಕಚೇರಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಿದೆ.
ಡಿ.12-19ರ ವರೆಗೆ 'ಸಕಾಲ ಸಪ್ತಾಹ' ಆಚರಣೆಗೆ ಸರ್ಕಾರ ತೀರ್ಮಾನ
ನಿಗದಿತ ಸಮಯದೊಳಗೆ ಸರ್ಕಾರಿ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶದಿಂದ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿತ್ತು. ಈ ಯೋಜನೆಯಡಿ ಸ್ವೀಕರಿಸಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡುವ ಸಲುವಾಗಿ ಡಿ.12ರಿಂದ ಡಿ.19ರ ವರೆಗೆ 'ಸಕಾಲ ಸಪ್ತಾಹ'ವನ್ನಾಗಿ ಆಚರಿಸುವಂತೆ ಎಲ್ಲ 30 ಇಲಾಖೆಗಳಿಗೆ ಸರ್ಕಾರ ಆದೇಶಿಸಿದೆ.