ನೆಲಮಂಗಲ : ಪದೇ ಪದೇ ಒಂದೇ ಸ್ಥಳದಲ್ಲಿ ರಸ್ತೆ ಅಪಘಾತ ನಡೆಯುತ್ತಿದ್ದು, ಅಪಘಾತಗಳಿಂದ ಬೇಸತ್ತ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.
ನೆಲಮಂಗಲ ತಾಲೂಕಿನ ಶಾಂತಿನಗರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪದೇ ಪದೇ ಅಪಘಾತಗಳು ಮರುಕಳಿಸುತ್ತಿದ್ದು, ಇಂದು ಕೂಡ ಅದೇ ಜಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಎರಡು ಕಾರು ಹಾಗೂ ಜೀಪ್‌ನ ನಡುವೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಂದೇ ಸ್ಥಳದಲ್ಲಿ ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದನ್ನು ಕಂಡು ಬೇಸತ್ತಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸರ್ವಿಸ್ ರಸ್ತೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ದೂರಿದರು. ಅಪಘಾತ ನಡೆದ ಸ್ಥಳಕ್ಕೆ ತಡವಾಗಿ ಬಂದ ಆಂಬ್ಯುಲೆನ್ಸ್ ಸಿಬ್ಬಂದಿಗಳು ಹಾಗೂ ಪೊಲೀಸರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.