ನೆಲಮಂಗಲ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರ ಪುತ್ರ ಗಣೇಶ್ ಪ್ರಯಾಣಿಸುತ್ತಿದ್ದರು ಎನ್ನಲಾದ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ನೆಲಮಂಗಲ ತಾಲೂಕಿನ ಜಿಂದಾಲ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬೆಂಗಳೂರಿಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಗಣೇಶ್ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.
ಮೃತ ಬೈಕ್ ಸವಾರನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ